ತಿಪಟೂರು: ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ 27 ಭಾನುವಾರದ೦ದು ಬೆಳಗ್ಗೆ 8 ರಿಂದ 11.30 ಗಂಟೆಯವರೆಗೆ ಕೇಂದ್ರ ಸರ್ಕಾರದ ಜಲ ಶಕ್ತಿ ಹಾಗೂ ರಾಜ್ಯ ರೈಲ್ವೆ ಖಾತೆಯ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ಜನಸಂಪರ್ಕ ಸಭೆಯನ್ನು ಆಯೋಜನೆ ಮಾಡಲಾಗಿದೆ, ಎಂದು ತಾಲ್ಲೂಕು ತಹಶೀಲ್ದಾರ್ ಪವನ್ ಕುಮಾರ್ ತಿಳಿಸಿದ್ದಾರೆ. ಸಾರ್ವಜನಿಕರು ಬಹು ಮುಖ್ಯವಾಗಿ ರೈಲ್ವೆ, ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದಂತೆ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದ್ದು, ಸಭೆಯಲ್ಲಿ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಖುದ್ದು ಕಡ್ಡಾಯವಾಗಿ ಹಾಜರಿಬೇಕಾಗಿದೆ ಎಂದು ತಿಳಿಸಿದರು.

