ಡಿಸೆಂಬರ್‌ 29ರಂದು ವಿಶ್ವಕರ್ಮ ಮಹಿಳಾ ಜಾಗೃತಿ ಸಾಮಾವೇಶ: ಲಕ್ಷ್ಮೀ ಬಡಿಗೇರ

ಭಾಸ್ಕರ ಪತ್ರಿಕೆ
0

 





ಧಾರವಾಡ: ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘದ ವತಿಯಿಂದ ವಿಶ್ವಕರ್ಮ ಮಹಿಳಾ ಜಾಗೃತಿ ಸಮಾವೇಶವನ್ನು ಡಿ.29 ರಂದು ಬೆಳಿಗ್ಗೆ 10:00 ಗಂಟೆಗೆ ನಗರದ ಕವಿಸಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮಿ ಬಡಿಗೇರ ಹೇಳಿದರು. 


ನಗರದಲ್ಲಿ ಬುಧವಾರ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಪಾಲಿಕೆ ಮೇಯರ್ ರಾಮಪ್ಪ ಬಡಿಗೇರ ಸೇರಿದಂತೆ ರಾಜಕೀಯ ಮುಖಂಡರು ಪಾಲ್ಗೊಳ್ಳುವರು. ರಾಜ್ಯದ ವಿವಿಧ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿದ ವಿಶ್ವಕರ್ಮ ಸಮಾಜದ ಮಹಿಳೆಯರನ್ನು ಸಮಾವೇಶದಲ್ಲಿ ಸನ್ಮಾನಿಸಲಾಗುವುದು. ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಸಂಘದ ರಾಜ್ಯಾಧ್ಯಕ್ಷ ಕನ್ನಡ ಸೋಮು ಮಾತನಾಡಿ, ಹಿಂದುಳಿದ ವರ್ಗಗಳ ಶೇ.15 ಮೀಸಲಾತಿಯಲ್ಲಿ ವಿಶ್ವಕರ್ಮ ಸಮಾಜಕ್ಕೆ ಶೇ.3 ಒಳಮೀಸಲಾತಿ ನೀಡಬೇಕು. ಸಮಾಜವನ್ನು ಪ್ರವರ್ಗ 1ಕ್ಕೆ ಸೇರಿಸಬೇಕು. 


ಜಾತಿ ಜನಗಣತಿ ಜಾರಿ ಮಾಡಬೇಕು. ರಾಜ್ಯದ ಒಂದು ವಿಶ್ವವಿದ್ಯಾಲಯಕ್ಕೆ ಅಮರಶಿಲ್ಪಿ ಜಕಣಾಚಾರಿ ಅವರ ಹೆಸರನ್ನಿಡಬೇಕೆಂದು ಆಗ್ರಹಿಸಿದರು. ಕಬ್ಬಿಣ ಮತ್ತು ಮರಗೆಲಸ ಮಾಡುವ ನಿವೃತ್ತ ವಿಶ್ವಕರ್ಮರಿಗೆ 6 ಸಾವಿರ ಮಾಸಾಶನ ನೀಡಬೇಕು. ವಿಧಾನಸೌಧದ ಮುಖ್ಯ ದ್ವಾರದಲ್ಲಿ ಭಗವಾನ್ ವಿಶ್ವಕರ್ಮ ಪ್ರತಿಮೆ ಸ್ಥಾಪಿಸಬೇಕು. ವಿಶ್ವಕರ್ಮ ನಿಗಮಕ್ಕೆ 300 ಕೋಟಿ ಅನುದಾನ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು. ಭಾಸ್ಕರ್ ಬಡಿಗೇರ, ಆನಂದರಾವ್ ಬಡಿಗೇರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.



ವರದಿ: ಸೂರಜ್‌ ಹಿರೇಮಠ


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*