ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಸಿಂಗನಾಯಕನಹಳ್ಳಿಯಲ್ಲಿ ನಡೆದಿದೆ.
ತಂದೆ, ತಾಯಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು, ಕೌಟುಂಬಿಕ ಕಲಹವೇ ಘಟನೆಗೆ ಕಾರಣವಾಗಿರಬಹುದು, ಎಂದು ಶಂಕಿಸಲಾಗಿದೆ.
ಕಲಬುರಗಿ ಮೂಲದ ದಂಪತಿಗಳು ಕಳೆದ ಹಲವು ವರ್ಷಗಳಿಂದ ಬೆಂಗಳೂರು ಸಿಂಗನಾಯಕನಹಳ್ಳಿಯಲ್ಲಿ ವಾಸವಾಗಿದ್ದರು. ಅವಿನಾಶ್ (33), ಮಮತಾ (30), ಅಧಿರಾ (05),
ಅನಯಾ (03) ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ.
ರಾಜಾನುಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆದಿದೆ.
