ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಪ್ರಕರಣ: ಸಿಐಡಿ ತನಿಖೆಗೆ

ಭಾಸ್ಕರ ಪತ್ರಿಕೆ
0


ಬೆಂಗಳೂರು: ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಮಹಿಳೆ ದಾಖಲಿಸಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ದೂರು ಪ್ರತಿದೂರಿನ ತನಿಖೆಯನ್ನು ಸಿಐಡಿ ಕೈಗೆತ್ತಿಕೊಂಡಿದೆ.

ಹಾವೇರಿ ಮೂಲದ ಮಹಿಳೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ವಿನಯ್ ಕುಲಕರ್ಣಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿದ್ದರು.


ಈ ಆರೋಪಕ್ಕೆ ಪ್ರತಿಯಾಗಿ ದೂರು ನೀಡಿರುವ ಶಾಸಕ ವಿನಯ್ ಕುಲಕರ್ಣಿ, ದೂರುದಾರೆ ಮಹಿಳೆ ಹಾಗೂ ಖಾಸಗಿ ಸುದ್ದಿವಾಹಿನಿಯೊಂದರ ಮುಖ್ಯಸ್ತರ ವಿರುದ್ಧ 2 ಕೋಟಿ ರೂ. ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ದೂರು ನೀಡಿದ್ದಾರೆ. ಇದೀಗ ಸಿಐಡಿ ಪೊಲೀಸರು ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.

ಹಾವೇರಿಯಲ್ಲಿ ರೈತಪರ ಹೋರಾಟಗಳಲ್ಲಿ ಸಕ್ರಿಯವಾಗಿದ್ದ ವೇಳೆ ವಿನಯ್ ಪರಿಚಯವಾಗಿದ್ದು, ನಂತರದ ದಿನಗಳಲ್ಲಿ ಪರಸ್ಪರ ಮೊಬೈಲ್ ಸಂಖ್ಯೆ ವಿನಿಮಯ ಮಾಡಿಕೊಂಡು ಸಭ್ಯತೆಯಿಂದ ಮಾತನಾಡುತ್ತಿದ್ದರು. ನಂತರದ ದಿನಗಳಲ್ಲಿ ಅಸಭ್ಯವಾಗಿ, ಅಶ್ಲೀಲವಾಗಿ ಸಂಭಾಷಣೆ ನಡೆಸುತ್ತಿದ್ದರು. 2022 ರಲ್ಲಿ ಕೆಲಸ ನಿಮಿತ್ತ ಬೆಂಗಳೂರಿಗೆ ಬಂದಿದ್ದಾಗ ಹೆಬ್ಬಾಳದ ತಮ ಮನೆಗೆ ಕರೆಸಿಕೊಂಡಿದ್ದಲ್ಲದೆ, ದೇವನಹಳ್ಳಿ ಸಮೀಪ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನನ್ನ ಮೇಲೆ ಅತ್ಯಾಚಾರ ನಡೆಸಿದರೆಂದು ಮಹಿಳೆ ದೂರು ನೀಡಿದ್ದಾರೆ.


ವಿನಾಕಾರಣ ದೂರುದಾರೆ ಮಹಿಳೆ ಹಾಗೂ ಖಾಸಗಿ ಸುದ್ದಿವಾಹಿನಿಯೊಂದರ ಮುಖ್ಯಸ್ಥರೊಬ್ಬರು ನನಗೆ ಕರೆ ಮಾಡಿ, ತಮಗೆ ಸೇರಿದ ಅಶ್ಲೀಲ ವಿಡಿಯೋಗಳಿವೆ ಎಂದು ಹೆದರಿಸಿ 2 ಕೋಟಿ ರೂ.ಗೆ ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ಶಾಸಕ ವಿನಯ್ ಕುಲಕರ್ಣಿ ಅವರು ಪ್ರತಿದೂರು ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*