ಜಾತಿ ಜನ ಗಣತಿ ಸರ್ಕಾರ ಮರು ಪರಿಶೀಲನೆ ಮಾಡುವ ಅಗತ್ಯವಿದೆ : ಶ್ರೀ ನಂಜಾವಧೂತ ಸ್ವಾಮೀಜಿ

ಭಾಸ್ಕರ ಪತ್ರಿಕೆ
0





ತುಮಕೂರು: ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಗ್ರಾಮದ ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದಲ್ಲಿ ಶರನ್ನವರಾತ್ರಿ ಅಂಗವಾಗಿ ಸೋಮವಾರ ನಡೆದ ಧರ್ಮ ಧ್ವಜ ಪ್ರತಿಷ್ಠಾಪನ ಮಹೋತ್ಸವದಲ್ಲಿ ಪಾಲ್ಗೊಂಡು ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಜಾತಿ ಜನ ಗಣತಿ ವರದಿ ಮರು ಪರಿಶೀಲಿಸಬೇಕೆಂದು ಆಗ್ರಹಿಸಿದರು.

ರಾಜ್ಯದಲ್ಲಿರುವ ಒಕ್ಕಲಿಗ ಮತ್ತು ಲಿಂಗಾಯಿತ ಸೇರಿದಂತೆ ಹಲವಾರು ಸಮುದಾಯಗಳ ಜಾತಿ ಜನಗಣತಿ ಸರಿಯಾದ ಕ್ರಮದಲ್ಲಿ ನಡೆದಿಲ್ಲ, ಇದು ಹಲವಾರು ಸಮುದಾಯಗಳ ಶೈಕ್ಷಣಿಕ, ಸಾಮಾಜಿಕ, ಉದ್ಯೋಗ ಗಳ ಮೇಲೆ ಪರಿಣಾಮ ಬೀರಲಿದೆ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆತುರ ಪಡದೆ ಜಾತಿ ಜನಗಣತಿ ಅನುಷ್ಠಾನಕ್ಕಿಂತ ಮುಂಚೆ ಮರು ಪರಿಶೀಲಿಸುವ ಅಗತ್ಯವಿದೆ.

ಮತ್ತೊಮ್ಮೆ ಜಾತಿ ಗಣತಿ ರಾಜ್ಯದಲ್ಲಿ ನಡೆದರೆ ಎಲ್ಲಾ ಸಮಾಜಗಳಿಗೂ ಸಾಮಾಜಿಕ ನ್ಯಾಯ ಸಿಗಲಿದೆ ಈ ಬಗ್ಗೆ ಆತುರದ ನಿರ್ಧಾರ ಬೇಡ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮಿಜಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*