ಸಚಿವ ಜಮೀರ್ ಅಹ್ಮದ್‌ರನ್ನು ಗಡಿಪಾರು ಮಾಡಿದ್ರೆ ರಾಜ್ಯಕ್ಕೆ ಒಳಿತು: ಬಿ.ವೈ ವಿಜಯೇಂದ್ರ

ಭಾಸ್ಕರ ಪತ್ರಿಕೆ
0


ಚಿತ್ರದುರ್ಗ: ಕರ್ನಾಟಕ ಎಂಬ ಶಾಂತಿಯುತ  ರಾಜ್ಯದಲ್ಲಿ ಜಮೀರ್‌ ಅಹಮದ್ರಿಂದ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. "ಅಹಿಂದ" ಹೆಸರು ಹೇಳಿ ಅಹಿಂದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂಗಳ ಆಸ್ತಿ, ರೈತರ ಜಮೀನು, ಮಠ ಮಾನ್ಯಗಳ ಆಸ್ತಿ ಕಬಳಿಸುವ ಕೆಲಸ ನಡೆಯುತ್ತಿದೆ. ಆದ್ರೆ ಸಿಎಂ ಸಿದ್ಧರಾಮಯ್ಯ  ಮೊಸಳೆ ಕಣ್ಣೀರು ಹಾಕ್ತಿದ್ದಾರೆ. ರೈತರಿಗೆ ನೀಡಿದ ನೋಟಿಸ್ ಹಿಂಪಡೆಯುವುದಾಗಿ ಹೇಳಿದ್ದಾರೆ. ತಾಕತ್ತಿದ್ದರೆ ಗೆಜೆಟ್  ಹಿಂಪಡೆಯಲಿ ಎಂದು ಸವಾಲ್‌ ಹಾಕಿದ್ದಾರೆ.

ಸಚಿವ ಜಮೀರ್ ಅಹ್ಮದ್ ಸಂವಿಧಾನದ ಬಗ್ಗೆ ಮಾತಾಡುತ್ತಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಗೂಂಡಾಗಿರಿ ಮಾಡಿ, ರೈತರ ಜಮೀನು, ಮಠಮಾನ್ಯಗಳ ಆಸ್ತಿ ಕಬಳಿಕೆ ಮಾಡಲಾಗುತ್ತಿದೆ. ವಕ್ಫ್ ಮೂಲಕ ಸಚಿವ ಜಮೀರ್ ಅಹ್ಮದ್ ಭೂಕಬಳಿಕೆ ಕೆಲಸ ಮಾಡ್ತಿದ್ದಾರೆ.ಅಲ್ಲಾಹ ನನ್ನ ವಕ್ಪ್‌ ಸಚೀವರನ್ನು ಮಾಡಿದ್ದಕ್ಕೆ ನಾ ಉತ್ತರ ಕೊಡಬೇಕು.....ಇತ್ಯಾದಿ ಭಾಷಣ ಮಾಡಿ,ಮಾಡೀ....ಸಮಾಜದ ಸ್ವಾಸ್ಥ್ಯ ಹಾಳುಮಾಡುತ್ತಿರೋ ಜಮೀರರಿಂದ ಶಾಂತಿ ಅಸಾಧ್ಯ,ಇವರನ್ನು  ಗಡಿಪಾರು ಮಾಡಿದ್ರೆ ಈ ರಾಜ್ಯಕ್ಕೆ ಒಳಿತು ಎಂದಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*