ತಿಪಟೂರು: ತಾಲೂಕಿನ ಹುಚ್ಚನಹಟ್ಟಿ ಗ್ರಾಮದ ಸಮೀಪ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ಗುಂಡಿಯಲ್ಲಿ ಕಾಣೆಯಾಗಿದ್ದ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಎರಡನೇ ತರಗತಿ ಮತ್ತು ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕರು ಮೃತರೆಂದು ತಿಳಿದು ಬಂದಿದೆ. ಇಬ್ಬರೂ ನಿನ್ನೆ ಸಂಜೆ 7 ಗಂಟೆಯಿಂದ ಕಾಣೆಯಾಗಿದ್ದರು. ಇಂದು ಬೆಳಗ್ಗೆ ಎತ್ತಿನಹೊಳೆ ಕಾಮಗಾರಿ ಮಾಡುತ್ತಿರುವ ಗುಂಡಿಯಲ್ಲಿ ಶವಗಳು ಸಿಕ್ಕಿವೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಹಾಗೂ ಕುಟುಂಬದವರು ಸ್ಥಳದಲ್ಲಿಯೇ ಶವಗಳನ್ನಿಟ್ಟು ಪ್ರತಿಭಟಿಸಿ, ಕಾಮಗಾರಿ ನಡೆಸುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಘಟನಾ ಸ್ಥಳಕ್ಕೆ ಶಾಸಕರಾದ ಕೆ ಷಡಕ್ಷರಿ ಅವರು ಭೇಟಿ ನೀಡಿ ಪರಿಶೀಲಿಸಿದರು.


