ಕುಪ್ಪಾಳು ಅರಿವು ಕೇಂದ್ರದಲ್ಲಿ ಗ್ರಂಥಾಲಯ ಸಪ್ತಾಹ ಆಚರಣೆ

ಭಾಸ್ಕರ ಪತ್ರಿಕೆ
0


ತಿಪಟೂರು: ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಡಿಜಿಟಲ್  ಗ್ರಂಥಾಲಯದ ಅರಿವು ಕೇಂದ್ರದಲ್ಲಿ ಗ್ರಂಥಾಲಯ ಸಪ್ತಾಹ ಹಾಗೂ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಷ್ಟೀಯ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಿ. ಪ್ರಸನ್ನಾತ್ಮ  ಉದ್ಘಾಟಿಸಿ ಮಾತನಾಡುತ್ತ ಶಾಲಾ ಮಕ್ಕಳು ಗ್ರಂಥಾಲಯವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು. ಪಠ್ಯ ಮತ್ತು ಪಠ್ಯೇತರ  ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಗ್ರಂಥಾಲಯದಲ್ಲಿ ಲಭ್ಯವಿರುವ ಸಮಾಜಿಕ ಜಾಲತಾಣಗಳಿಂದ ಉತ್ತಮ ಶಿಕ್ಷಣವನ್ನು ಮೈಗೂಡಿಸಿಕೊಂಡಾಗ ಮಾತ್ರ ನಿಮ್ಮ ಶಿಕ್ಷಣಕ್ಕೆ ಮಹತ್ವ ದೊರೆಯುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಿಕ್ಷಕಿ ಪೂರ್ಣಿಮಾ ವಿಜೇತರಾದ ಶಾಲಾ ಮಕ್ಕಳಿಗೆ ಬಹುಮಾನ ವಿತರಿಸಿದರು, ಗ್ರಂಥಾಲಯ ಮೇಲ್ವಿಚಾರಕ ಪಿ. ಶಂಕರಪ್ಪಬಳ್ಳೇಕಟ್ಟೆ ಎಲ್ಲರನ್ನು ಸ್ವಾಗತಿಸಿದರೆ, ನೀರುವಿತರಕ ಕರಡಾಳು ಪಾಳ್ಯ ಸೋಮಶೇಖರ್  ನಿರೂಪಿಸಿ ಎಲ್ಲರಿಗೂ ಸಿಹಿ ವಿತರಿಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*