ತಹಶೀಲ್ದಾರ್‌ ಕಛೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಎಸ್‌ಡಿಎ ರುದ್ರಣ್ಣ ಯಡವಣ್ಣವರ್‌

ಭಾಸ್ಕರ ಪತ್ರಿಕೆ
0




ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲಿಯೇ ಎಸ್‌ಡಿಎ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಇಂದು(ಮಂಗಳವಾರ) ಬೆಳಗ್ಗೆ ನಡೆದಿದೆ.

ತಹಶಿಲ್ದಾರ್ ಕಚೇರಿಯ ಎಸ್ ಡಿ ಎ ರುದ್ರಣ್ಣ ಯಡವಣ್ಣವರ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದ್ದು ಇಂದು ಮುಂಜಾನೆ  ತಹಸೀಲ್ದಾರ್ ಬಸವರಾಜ ನಾಗರಾಳ ಕಚೇರಿಗೆ ಬಂದಾಗ ಈ ಘಟನೆ ತಿಳಿದಿದೆ, ತಕ್ಷಣ ತಹಸೀಲ್ದಾರ್ ಬಸವರಾಜ ನಾಗರಾಳ ಅವರು ತಮ್ಮ ಸರಕಾರಿ ವಾಹನದಲ್ಲಿಯೇ ಅಲ್ಲಿಂದ ಹೊರಟು ಹೋಗಿದ್ದಾರೆ, ತಹಶಿಲ್ದಾರ ಕಚೇರಿಯಲ್ಲಿ ತುಂಬಾ ಅಕ್ರಮ ನಡೆಯುತ್ತಿದ್ದು, ಎಲ್ಲಾ ಸಿಬ್ಬಂದಿ ಒಟ್ಟಾಗಿ ಹೋರಾಡಬೇಕಿದೆ ಎಂದು ರುದ್ರಣ್ಣ  ಹೇಳಿದ್ದಾರೆ ಎನ್ನಲಾಗಿದ್ದು, ತಹಸೀಲ್ದಾರ್ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದ ರುದ್ರಣ್ಣರ  ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನಾ ಸ್ಥಳಕ್ಕೆ ಬೆಳಗಾವಿ ಎಸಿ, ಡಿಸಿಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಇವರ ವರ್ಗಾವಣೆಗೆ ನಿನ್ನೆಯಷ್ಟೇ ಬೆಳಗಾವಿಯ ಜಿಲ್ಲಾಧಿಕಾರಿ ರೋಷನ್ ಬೇಗ್ ಅವರು ಸವದತ್ತಿಯ ಯಲ್ಲಮ್ಮಅಭಿವೃದ್ದಿ ಪ್ರಾಧಿಕಾರಕ್ಕೆ ವರ್ಗ ಮಾಡಿ ಆದೇಶ ಹೊರಡಿಸಿದ್ದರು!ರುದ್ರಣ್ಣರ ಸಾವಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಪಿಎ ಸೋಮು ನೇರ ಕಾರಣವಾಗಿದ್ದು, ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್. ಅಶೋಕ, ವಿಜಯಪುರ ನಗರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*