ತಿಪಟೂರು: ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ನಗರದ ಶಿವಕುಮಾರ್ ಸ್ವಾಮೀಜಿ ವೃತ್ತ ಸರ್ಕಲ್ ಕೆಐಟಿ ಆಟೋ ಮಾಲೀಕರ ಸಂಘದ ವತಿಯಿಂದ 69 ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಭಾಸ್ಕರ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ. ಭಾಸ್ಕರರ್ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು.
