ತುಮಕೂರು: ಬೆಸ್ಕಾಂ ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ಕೇಬಲ್ ಅಳವಡಿಕೆ ಕಾಮಗಾರಿ ನಡೆಯುತ್ತಿರುವುದರಿಂದ ನವೆಂಬರ್ 28ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶ, ಮಾರುಕಟ್ಟೆ ಮತ್ತು ಮಹಾಲಕ್ಷ್ಮಿ ಲೇಔಟ್ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ಮನವಿ ಮಾಡಿದ್ದಾರೆ.