ನವಜಾತ ಶಿಶುವಿನ ಪೋಷಕರ ಪತ್ತೆಗಾಗಿ ಮನವಿ

ಭಾಸ್ಕರ ಪತ್ರಿಕೆ
0



ತುಮಕೂರು:   ತುಮಕೂರು ತಾಲ್ಲೂಕು ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿ ಚನಗಪ್ಪನಪಾಳ್ಯ ಬಾರೆ ಹತ್ತಿರ ಅಕ್ಟೋಬರ್ 19ರಂದು ಮಧ್ಯಾಹ್ನ 12:30ರ ಸಮಯದಲ್ಲಿ ನವಜಾತ ಶಿಶುವೊಂದು ದೊರೆತಿದ್ದು, ಪೋಷಕರು ಯಾರೆಂದು ತಿಳಿದು ಬಂದಿರುವುದಿಲ್ಲ.

ನವಜಾತ ಶಿಶುವು ಸಾಧಾರಣ ಮೈಕಟ್ಟು, ಕಂದು ಮೈಬಣ್ಣ, ದುಂಡು ಮುಖ ಹೊಂದಿದ್ದು, ಪೋಷಕರ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ದೂ.ವಾ.ಸಂ.9480802953, 9110857472, 0816–2241036/ 2956699ನ್ನು ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕವನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*