ಧಾರವಾಡ: ಕೆ.ಎಲ್.ಇ ಸಂಸ್ಥೆಯ ಶ್ರೀ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹುಬ್ಬಳ್ಳಿಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಡಿಸೆಂಬರ್ 5ರಂದು ಬೆಳಗ್ಗೆ 9:00 ರಿಂದ ಸಂಜೆ 4:00 ರವರೆಗೆ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
2000ಕ್ಕೂ ಹೆಚ್ಚಿನ ಉದ್ಯೋಗಗಳ ಅವಕಾಶ ಸೃಷ್ಟಿಸಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಐಟಿಐ, ಡಿಪ್ಲೋಮಾ, ಬಿ.ಇ, ಎಂ.ಟೆಕ್, ಬಿ.ಎಡ್, ಡಿ.ಎಡ್, ಪಿ.ಜಿ, ಎಮ್.ಎಸ್ಸಿ, ಎಮ್.ಎ, ಎಂ.ಕಾಂ, ಎಂ.ಸಿ.ಎ, ಎಂ.ಬಿ.ಎ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ಪೋರ್ಟ್, ಆಧಾರ್ ಕಾರ್ಡ್ ಹಾಗೂ ಸ್ವ- ವಿವರ ಅರ್ಜಿಯೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಂಡು, ಈ ಮೇಳದ ಸದುಪಯೋಗ ಪಡೆದುಕೊಳ್ಳಬೇಕಾಗಿ ಶಾಸಕರಾದ ಅರವಿಂದ ಬೆಲ್ಲದ್ ವಿನಂತಿಸಿಕೊಂಡಿದ್ದಾರೆ.
