ಶ್ರೀಮತಿ ರೂಪ ಪರಮೇಶ್ ಅರಸೀಕೆರೆ ತಾಲ್ಲೂಕು ಹಾಸನ ಜಿಲ್ಲೆ ಶಿಕ್ಷಕರು ಮತ್ತು ಸಮಾಜ ಸೇವಕರು ಇವರಿಗೆ ಡಿಸೆಂಬರ್ 29 ರಂದು ಧಾರವಾಡದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಮಹಿಳಾ ಪ್ರಥಮ ಜಾಗೃತಿ ಸಮಾವೇಶದಲ್ಲಿ ಮಹಿಳಾ ಸಾಧಕಿ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಕರ್ನಾಟಕ ವಿಶ್ವಕರ್ಮ ಜನ ಸೇವಾ ಸಂಘದ ರಾಜ್ಯಾಧ್ಯಕ್ಷರಾದ ಸೋಮಶೇಖರ್ (ಕನ್ನಡ ಸೋಮು) ಹಾಗೂ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಲಕ್ಷ್ಮೀ ಭಾಸ್ಕರ್ ಬಡಿಗೇರ್ ತಿಳಿಸಿದ್ದಾರೆ. ಇವರಿಗೆ ಕರ್ನಾಟಕ ವಿಶ್ವಕರ್ಮ ಜನ ಸೇವಾ ಸಂಘ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರು, ವಿಶ್ವಕರ್ಮ ಸಮಾಜದ ಮುಖಂಡರು, ಜಿಲ್ಲಾಧ್ಯಕ್ಷರು ಕರ್ನಾಟಕ ಸಂಪಾದಕರ ಮತ್ತು ವರದಿಗಾರರ ಸಂಘ ತುಮಕೂರು ಜಿಲ್ಲೆ ಹಾಗೂ ಭಾಸ್ಕರ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ. ಭಾಸ್ಕರ್ ಅಭಿನಂದನೆ ಸಲ್ಲಿಸಿದ್ದಾರೆ.
ಕಾಮೆಂಟ್ ಪೋಸ್ಟ್ ಮಾಡಿ
0ಕಾಮೆಂಟ್‌ಗಳು
3/related/default

