ಬೈಕ್ ಸವಾರನಿಗೆ ಹೃದಯಾಘಾತ: ತಡೆಗೋಡೆಗೆ ಬೈಕ್ ಅಪ್ಪಳಿಸಿ ಸವಾರ ಸಾವು

ಭಾಸ್ಕರ ಪತ್ರಿಕೆ
0



ಮೈಸೂರು: ಇತ್ತೀಚೆಗೆ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮೈಸೂರಿನಲ್ಲಿ ಇದೀಗ ಬೈಕ್ ಸವಾರನೊಬ್ಬ ಬೈಕ್ ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತಗೊಂಡು, ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ಚಾಮರಾಜನಗರ ತಾಲೂಕಿನ ನಂಜೇದೇವನಪುರ ಗ್ರಾಮದ ರವಿ(40) ಎಂದು ಗುರುತಿಸಲಾಗಿದೆ.

ಬೈಕ್ ಸವಾರ ಬೈಕ್ ನ್ನು ಚಲಾಯಿಸುತ್ತಿದ್ದ ವೇಳೆಯೇ ಏಕಾಏಕಿ ಹೃದಯಾಘಾತದಿಂದ ಪ್ರಜ್ಞೆ ಕಳೆದುಕೊಂಡು ಬೈಕ್ ನ ಮೇಲೆಯೇ ಕುಸಿದಿದ್ದಾನೆ. ಬೈಕ್ ಚಾಲನೆಯಲ್ಲಿದ್ದ ಪರಿಣಾಮ ತಡೆಗೋಡೆಗೆ ಅಪ್ಪಳಿಸಿದ್ದು, ಪರಿಣಾಮವಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*