ತಂದೆಯ ಅಂತ್ಯ ಸಂಸ್ಕಾರ ನೆರವೇರಿಸಿದ 11 ವರ್ಷದ ಬಾಲಕಿ

ಭಾಸ್ಕರ ಪತ್ರಿಕೆ
0

ತುಮಕೂರು: ತನ್ನ ತಂದೆಯ ಅಂತ್ಯ ಸಂಸ್ಕಾರವನ್ನು 11 ವರ್ಷದ ಬಾಲಕಿ ಒಬ್ಬಳು ನೆರವೇರಿಸಿರುವ ಘಟನೆ ತುಮಕೂರು ತಾಲ್ಲೂಕು  ಪೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

6ನೇ ತರಗತಿ ಓದುತ್ತಿರುವ 11ನೇ ವರ್ಷದ ಮೋನಿಷ ಎಂಬ ಹೆಣ್ಣು ಮಗುವೊಂದು ತನ್ನ ತಂದೆಯ ಅಂತ್ಯಕ್ರಿಯೆಯನ್ನು ನಡೆಸಿ  ಮಾದರಿಯಾಗಿದ್ದಾಳೆ.

ಕಳೆದ ಎರಡು ದಿನಗಳ ಹಿಂದೆ ತನ್ನ ತಂದೆಯಾದ ಕೆಂಪರಾಜು  (48 ವರ್ಷ) ಕ್ಯಾನ್ಸರ್‌ಖಾಯಿಲೆಯಿಂದ ಸಾವನ್ನಪ್ಪಿದ್ದರು.

ಮೂಲತಃ ಆಟೋ ಚಾಲಕರಾಗಿದ್ದ ತಂದೆ ಕೆಂಪರಾಜು, ಬಡತನದಿಂದಲೇ ಜೀವನ ನಡೆಸುತ್ತಿದ್ದರು, ಆತನಿಗೆ ಇಬ್ಬರೂ ಸಹ ಹೆಣ್ಣು ಮಕ್ಕಳಿದ್ದು ಹಿರಿಯ ಮಗಳಾದ ಮೋನಿಷ ತನ್ನ ತಂದೆಯ ಅಂತ್ಯಕ್ರಿಯೆಯನ್ನು ನಡೆಸಿ ಗ್ರಾಮಸ್ಥರ ಹುಬ್ಬೇರಿಸುವಂತೆ ಮಾಡಿದ್ದಾಳೆ.

ಈಕೆಯ ಕಾರ್ಯಕ್ಕೆ ಗ್ರಾಮಸ್ಥರು ಸಹ ಬೆಂಬಲಿಸಿದ್ದು, ಹಲವಾರು ಜನರಿಗೆ ಮಾದರಿಯಾಗಿದ್ದಾಳೆ. ಇನ್ನು ಈ ಕುಟುಂಬದ ಪೋಷಣೆಯನ್ನು ಮಗುವಿನ ಸಂಬಂಧಿಕರು ನೋಡಿಕೊಳ್ಳಲು ಮುಂದಾಗಿದ್ದಾರೆ.

ಹೆಣ್ಣು ಬರೀ ಆರತಿಗೆ ಮಾತ್ರವೇ ಸೀಮಿತವಾಗಿರದೇ ಕೀರ್ತಿಯನ್ನು ತಂದುಕೊಡಲು ಸಹ ಯಾವುದೇ ಕಾರಣಕ್ಕೂ ಹಿಂದೆ ಬೀಳುವುದಿಲ್ಲ ಎನ್ನುವುದಕ್ಕೆ ಮೋನಿಷ ಸಾಕ್ಷಿಯಾಗಿದ್ದಾಳೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*