ತಿಪಟೂರು: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಶ್ರೀಮತಿ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಶ್ರೀ ಕನಕರೆಡ್ಡಿ ರವರು ದಿನಾಂಕ:24-01-2025 ರಂದು KSWAN ಸಭೆಯನ್ನು ತೆಗೆದುಕೊಂಡು ಜಿಲ್ಲೆಯ 29 ಗ್ರಾಮ ಆಡಳಿತ ಅಧಿಕಾರಿಗಳನ್ನು ಯಾವುದೇ ತಿಳುವಳಿಕೆ ನೀಡದೇ/ ವಿಚಾರಣೆ ನಡೆಸದೇ ಏಕಾಏಕಿ ಸಂಚಿತ ಪರಿಣಾಮರಹಿತವಾಗಿ ಒಂದು ವಾರ್ಷಿಕ ವೇತನ ಬಡ್ತಿಯನ್ನು ದಂಡನೆ ವಿಧಿಸಿ ಆದೇಶಿಸಿರುತ್ತಾರೆ.
ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀಮತಿ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಶ್ರೀ ಕನಕರೆಡ್ಡಿ ಇವರ ದುರಾಡಳಿತ ಮತ್ತು ದರ್ಪದ ಕಾರಣಗಳಿಂದಾಗಿ ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವ ಬಗ್ಗೆ ತಿಪಟೂರು ತಾಲೂಕು ದಂಡಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ತಿಪಟೂರು ಶಾಖೆಯಿಂದ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳು ಪವನ್ ಕುಮಾರ್, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ತಿಪಟೂರು ಶಾಖೆ ಅಧ್ಯಕ್ಷರು ರವಿಕುಮಾರ್, ಉಪಾಧ್ಯಕ್ಷರು ಮಹಾಂತೇಶ್, ಪ್ರಧಾನ ಕಾರ್ಯದರ್ಶಿ ಯಮುನಾ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

