ತುಮಕೂರು: ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಡಿನಾಡು ಮಿತ್ರ ಸಂಪಾದಕರಾದ ರಾಮಾಂಜಿನಪ್ಪ ಅವರನ್ನು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ, ಟಿ.ಎಸ್ ಕೃಷ್ಣಮೂರ್ತಿ ನೇತೃತ್ವದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಲಾಯಿತು. ಪಾವಗಡದಲ್ಲಿ ನಡೆದ ಘಟನೆ ಕುರಿತು ಕುಟುಂಬದವರಿಂದ ಹೆಚ್ಚಿನ ಮಾಹಿತಿ ಪಡೆದಿದ್ದು, ಈ ಸಂಬಂಧ ಇಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು.
ಈ ಸಂದರ್ಭದಲ್ಲಿ ರಾಜ್ಯ ಜಂಟಿಕಾರ್ಯದರ್ಶಿ ಸಿ.ರಂಗನಾಥ, ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ. ಪಿ.ಎಸ್., ಜಿಲ್ಲಾ ಸಂಘಟನಾಕಾರ್ಯದರ್ಶಿ ಮಹೇಶ್ ಕುಮಾರ್ .ಸಿ.ಎನ್. ಇದ್ದರು

