ತಿಪಟೂರು: ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗದವರು ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸದೆ ಕಾಲ ಹರಣ ಮಾಡುತ್ತಿದ್ದಾರೆ ಇದರಿಂದ ಸಾರ್ವಜನಿಕರಿಗೆ ಬಹಳ ಸಮಸ್ಯೆಯಾಗುತ್ತಿದೆ ಹಾಗೂ ಇದನ್ನು ಇಲಾಖೆಯ ಅಧಿಕಾರಿಗೆ ತಿಳಿಸಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಮತ್ತು ಪ್ರತಿನಿತ್ಯ ಸಮಾಜ ಕಲ್ಯಾಣ ಇಲಾಖೆ ತಿಪಟೂರು ಕಚೇರಿಗೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಭೇಟಿಕೊಟ್ಟು ಹೈರಾಣ ಆಗಿ ಕೆಲಸವು ಆಗದೆ ಸುಮ್ಮನೆ ನಿರಾಶಾದಾಯಕವಾಗಿ ತೆರಳುತ್ತಿದ್ದಾರೆ ಇದನ್ನು ತಿಪಟೂರು ವಿಧಾನಸಭಾ ಕ್ಷೇತ್ರದ ಶಾಸಕರು ಸಹ ಈ ಇಲಾಖೆಯ ಬಗ್ಗೆ ಗಮನ ಕೊಟ್ಟು ಮತ್ತು ಸಮಾಜ ಕಲ್ಯಾಣ ಇಲಾಖೆ ತಿಪಟೂರು ಈ ಕಚೇರಿಗೆ ಭೇಟಿ ಕೊಡಬೇಕು ಎಂದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸಮಸ್ಯೆಯನ್ನು ಬಗೆಹರಿಸಿ ಕಚೇರಿಯ ಸಿಬ್ಬಂದಿ ವರ್ಗದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ ಹಾಗೂ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ವಿಷಯವಾಗಿ ಕಚೇರಿಗೆ ಬಂದಾಗ ಸರಿಯಾದ ರೀತಿಯ ಮಾಹಿತಿಯನ್ನು ಒದಗಿಸದೆ ನಿಮ್ಮ ಶಾಲಾ ಕಾಲೇಜಿನಲ್ಲಿ ನಿಮ್ಮ ಮಾಹಿತಿಯನ್ನು ನಮ್ಮ ಇಲಾಖೆಗೆ ಸರಿಯಾದ ರೀತಿಯಲ್ಲಿ ವರ್ಗಾಯಿಸಿಲ್ಲ ಎಂದು ತಪ್ಪು ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿಯನ್ನು ಕೊಡುತ್ತಿದ್ದಾರೆ ಇಲಾಖೆಯ ಸಿಬ್ಬಂದಿ ವರ್ಗದವರು ಇದರಿಂದ ವಿದ್ಯಾರ್ಥಿಗಳು ಬಹಳ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ತಿಪಟೂರು ಕಚೇರಿಯ ಸಿಬ್ಬಂದಿ ವರ್ಗದವರು ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲವೆಂದು ಸಾರ್ವಜನಿಕರರು ಹೇಳುತ್ತಿದ್ದಾರೆ ಮತ್ತು ಕಚೇರಿಯ ಸಮಯ ಮುಗಿಯದೆ ಸಮಯಕ್ಕೆ ಮುಂಚೆಯೇ ಮನೆಗೆ ತೆರಳುತ್ತಿದ್ದಾರೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ ಈ ವಿಷಯವಾಗಿ ಸಂಬಂಧಪಟ್ಟ ಮೇಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಕೋರಿ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಸಮಸ್ಯೆಗಳನ್ನು ಪರಿಹರಿಸದೆ ಕಾಲ ಹರಣ ಮಾಡುತ್ತಿದೆ: ಸೂಕ್ತ ಕ್ರಮಕ್ಕಾಗಿ ಸಾರ್ವಜನಿಕರ ಒತ್ತಾಯ
ಜನವರಿ 29, 2025
0
Tags

