ಉತ್ತರ ಪ್ರದೇಶದ ಬಾಗ್ಪತ್ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಜೈನ ನಿರ್ವಾಣ ಉತ್ಸವದಲ್ಲಿ ವೇದಿಕೆ ಕುಸಿದು 5 ಜನರು ಸಾವನ್ನಪ್ಪಿದ್ದಾರೆ ಮತ್ತು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ.
ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡುಗಳನ್ನು ಅರ್ಪಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದೆಉತ್ತರ ಪ್ರದೇಶದ ಬಾಗ್ಪತ್ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಜೈನ ನಿರ್ವಾಣ ಉತ್ಸವದಲ್ಲಿ ವೇದಿಕೆ ಕುಸಿದು 5 ಜನರು ಸಾವನ್ನಪ್ಪಿದ್ದಾರೆ ಮತ್ತು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ.
ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡುಗಳನ್ನು ಅರ್ಪಿಸುವ ಸಮಾರಂಭದಲ್ಲಿ ಬಿದಿರು ಮತ್ತು ಮರದಿಂದ ಮಾಡಿದ ತಾತ್ಕಾಲಿಕ ವೇದಿಕೆ ಕುಸಿದಾಗ ಈ ಘಟನೆ ಸಂಭವಿಸಿದೆ.
ಈ ಕಾರ್ಯಕ್ರಮವನ್ನು ಸುಮಾರು 30 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ. ಕನಿಷ್ಠ 40 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಾಗ್ಪತ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಸ್ಮಿತಾ ಲಾಲ್ ತಿಳಿಸಿದ್ದಾರೆ.
ಇನ್ನು ಪರಿಸ್ಥಿತಿಯನ್ನು ನಿಭಾಯಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳು ದೊಡ್ಡ ಪೊಲೀಸ್ ಪಡೆಯೊಂದಿಗೆ ಸ್ಥಳಕ್ಕೆ ಆಗಮಿಸಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

