ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಶನಿವಾರ ಮುಂಜಾನೆ ನಿಲ್ಲಿಸಿದ್ದ ಎರಡು ವಾಹನಗಳನ್ನು ಭಾರಿ ಬೆಂಕಿ ಕಾಣಿಸಿಕೊಂಡಿದೆ. ಮಹಾಕುಂಭಮೇಳಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಕಾರುಗಳಿಂದ ಹೊಗೆಯ ಹೋಗುತ್ತಿರುವುದು ಕಂಡುಬಂದಿದೆ. ಹಲವಾರು ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.
ಸುದ್ದಿ ಸಂಸ್ಥೆ ಎಎನ್ಐ ಜೊತೆ ಮಾತನಾಡಿದ ಯುಪಿ ಅಗ್ನಿಶಾಮಕ ಅಧಿಕಾರಿ ವಿಶಾಲ್ ಯಾದವ್, “ಭಕ್ತರು ದೂರದ ಪ್ರದೇಶಗಳಿಂದ ಬಂದು ತಮ್ಮ ವಾಹನಗಳನ್ನು ಇಲ್ಲಿ ನಿಲ್ಲಿಸಿದ್ದಾರೆ. ವಿಪರೀತ ಶಾಖದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿದ್ದು, ಬೆಂಕಿಯನ್ನು ನಿಯಂತ್ರಿಸಲಾಗಿದೆ. ಎರ್ಟಿಗಾ ಕಾರು ಸಂಪೂರ್ಣವಾಗಿ ಸುಟ್ಟುಹೋಗಿದೆ, ಮತ್ತು ವೆನ್ಯೂ ಕಾರು ಭಾಗಶಃ ಸುಟ್ಟುಹೋಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಎಲ್ಲರೂ ಸುರಕ್ಷಿತವಾಗಿದ್ದಾರೆ” ಎಂದಿದ್ದಾರೆ.

