ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು:  ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿ

ಭಾಸ್ಕರ ಪತ್ರಿಕೆ
0


ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ವ್ಯಾಪ್ತಿಯ ಬಾಳೂರು ಮೀಸಲು ಅರಣ್ಯದಲ್ಲಿ ಸೋಮವಾರ ರಾತ್ರಿ ಕಾಡಗಿಚ್ಚು ಉಂಟಾಗಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ

ಬಾಳೂರು ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ಬಿದಿರುತಳಗ್ರಾಮದ ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು ನೂರಾರು ಎಕರೆ ಅರಣ್ಯ ನಾಶವಾಗಿರುವ ಬಗ್ಗೆ ವರದಿಯಾಗಿದೆ.

ಯಾರೋ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಇಟ್ಟಿದ್ದು, ಕಾಡು ಪ್ರಾಣಿಗಳು ಹಾಗೂ ಸೂಕ್ಷ್ಮ ಪ್ರಭೇದದ ನೂರಾರು ಜಾತಿಯ ಪ್ರಾಣಿ ಪಕ್ಷಿಗಳ ಜೀವಕ್ಕೆ ಸಂಚಕರವಾಗಿದೆ

ಬಿದಿರುತಳ ಗ್ರಾಮಕ್ಕೆ ರಸ್ತೆ ವ್ಯವಸ್ಥೆ ಇಲ್ಲದೆ ಕಾಡ್ಗಿಚ್ಚು ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹೋಗುವುದು ಸವಾಲಿನ ಸಂಗತಿಯಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*