ಸರ್ಕಾರಿ ಬಸ್ ಗಳ ಟಿಕೆಟ್ ದರ ಏರಿಕೆ ಇಂದಿನಿಂದಲೇ ಜಾರಿ

ಭಾಸ್ಕರ ಪತ್ರಿಕೆ
0

ಬೆಂಗಳೂರುಸರ್ಕಾರಿ ಬಸ್ ಗಳ ಟಿಕೆಟ್ ದರ ಏರಿಕೆ ಭಾನುವಾರ ಮಧ್ಯ ರಾತ್ರಿಯಿಂದಲೇ ಜಾರಿಯಾಗಿದೆ.  ಶೇ.15ರಷ್ಟು ಟಿಕೆಟ್ ದರ ಹೆಚ್ಚಳವಾಗಿದೆ.

ಸಾರಿಗೆ ಇಲಾಖೆ ಕೆಎಸ್​ಆರ್​ಟಿಸಿ (KSRTC), ಬಿಎಂಟಿಸಿ (BMTC), ಎನ್​ಡಬ್ಲೂಕೆಆರ್​ಟಿಸಿ (NWKRTC), ಕೆಕೆಆರ್​ಟಿಸಿ (KKRTC) ಬಸ್​ಗಳ ಟಿಕೆಟ್ ದರ ಪರಿಷ್ಕರಣೆ ಮಾಡಲಾಗಿದೆ.

50ರಿಂದ 100 ರೂಪಾಯಿಗಳಷ್ಟು ಟಿಕೆಟ್ ದರ ಏರಿಕೆಯಾಗಿದೆ. ಕೆಎಸ್ಆರ್ ಟಿಸಿ ಪಾಸ್ 150 ರಿಂದ 200 ರೂಪಾಯಿವರೆಗೆ ಹೆಚ್ವಳವಾಗಿದ್ದರೆ, ಬಿಎಂಟಿಸಿ ಪಾಸ್ ದರ 100 ರಿಂದ 150 ರೂಪಾಯಿವರೆಗೆ ಏರಿಕೆ ಆಗಿದೆ.

ಬಸ್ ದರ ಏರಿಕೆ ವಿರುದ್ಧ ವಿಪಕ್ಷ ಬಿಜೆಪಿ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದರೂ, ವಿರೋಧಗಳ ನಡುವೆಯೇ ಬಸ್ ಪ್ರಯಾಣ ದರ ಏರಿಕೆ ಮಾಡಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*