ನಾಳೆ ತಿಪಟೂರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಭಾಸ್ಕರ ಪತ್ರಿಕೆ
0


 

ತಿಪಟೂರು: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರವರು ದಿನಾಂಕ 19.02.2025 ರಂದು ಬುಧವಾರ ತಿಪಟೂರಿಗೆ ಆಗಮಿಸಲಿದ್ದಾರೆ,

ತುಮಕೂರು ನಗರದ ಶ್ರೀದೇವಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಆಯೋಜನೆ ಮಾಡಿರುವ CATHಪ್ರಯೋಗಾಲಯ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುವ ಸಚಿವರು.ನಂತರ ಚಿಕ್ಕನಾಯ್ಕನಹಳ್ಳಿ ತಾಲ್ಲೋಕಿನ ಗೂಬೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ ನಂತರ ತಿಪಟೂರು ಸುಮಾರು 2.30ಗಂಟೆಗೆ ಆಗಮಿಸಲಿದ್ದಾರೆ,ತಿಪಟೂರಿಗೆ ಭೇಟಿನೀಡಿ, ಕ್ಷೇತ್ರದ ಸಾರ್ವಜನಿಕ ಆಸ್ಪತ್ರೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿನೀಡಿ ಆಸ್ಪತ್ರೆಯ ವ್ಯವಸ್ಥೆಗಳ ಪರಿಶೀಲನೆ ನಡೆಸಲಿದ್ದು ಶಾಸಕ ಕೆ.ಷಡಕ್ಷರಿಯವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು,ಇಲಾಖೆಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರಲ್ಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*