ಕಾಲೇಜಿನಿಂದ ವಾಪಸ್ ಆಗ್ತಿದ್ದ ವೇಳೆ ಕ್ರೌರ್ಯ: ಲಿಫ್ಟ್ ನೀಡಿ ಬಾಲಕಿಯ ಅತ್ಯಾಚಾರ ಮಾಡಿದ ಕಿರಾತಕ

ಭಾಸ್ಕರ ಪತ್ರಿಕೆ
0

ಕಾಲೇಜಿನಿಂದ ಮನೆಗೆ ಹಿಂತಿರುಗುತ್ತಿದ್ದ 17 ವರ್ಷದ ಬಾಲಕಿಗೆ ಬೈಕ್‌ನಲ್ಲಿ ಲಿಫ್ಟ್ ನೀಡಿದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಮುಜಫರ್ ನಗರ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿಯು ಬಿಟೆಕ್ ವಿದ್ಯಾರ್ಥಿನಿ ಎಂದು ಪೊಲೀಸರು ತಿಳಿಸಿದ್ದಾರೆ.

ಫೆಬ್ರವರಿ 21 ರ ಸಂಜೆ ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮತ್ತು ಕೃತ್ಯ ಎಸಲು ಆತನಿಗೆ ಸಹಾಯ ಮಾಡಿದ ಆತನ ಮೂವರು ಸ್ನೇಹಿತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಹಿಮಾಂಶು ತನ್ನ ಬೈಕ್‌ನಲ್ಲಿ ಬಾಲಕಿಗೆ ಲಿಫ್ಟ್ ನೀಡಿದ್ದಾನೆ ಎಂದು ಚರ್ತಾವಲ್ ಪೊಲೀಸ್ ಠಾಣೆಯ ಉಸ್ತುವಾರಿ ರಾಜೇಶ್ ಧನ್ವತ್ ತಿಳಿಸಿದ್ದಾರೆ.

ಅನಂತರ ಆರೋಪಿ ಬಾಲಕಿಯನ್ನು ಹೊಲಕ್ಕೆ ಕರೆದೊಯ್ದು, ಅಲ್ಲಿ ಅತ್ಯಾಚಾರ ಎಸಗಿದ್ದಾನೆ. ಅವನ ಮೂವರು ಸ್ನೇಹಿತರು ಈ ಕೃತ್ಯದಲ್ಲಿ ಅವನಿಗೆ ಸಹಾಯ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಬಾಲಕಿ ತನ್ನ ಹೆತ್ತವರಿಗೆ ತನ್ನ ಮೇಲೆ ನಡೆದ ದೌರ್ಜನ್ಯದ ಬಗ್ಗೆ ವಿವರಿಸಿದಳು, ಅವರು ಹಿಮಾಂಶು ಮತ್ತು ಆತನ ಸ್ನೇಹಿತರಾದ ಸಗೀರ್, ಸಿದ್ಧಾರ್ಥ್ ಮತ್ತು ಆದೇಶ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಮತ್ತು ಪೋಕ್ಸೋ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*