ವಿಶ್ವಕರ್ಮ ನಿಗಮಕ್ಕೆ ವಸಂತ ಮುರಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಆಗ್ರಹ

ಭಾಸ್ಕರ ಪತ್ರಿಕೆ
0

 

0

ಬೆಂಗಳೂರು: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಶ್ರೀಮತಿ ವಸಂತ ಮುರಳಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ರಾಜ್ಯ ವಿಶ್ವಬ್ರಾಹ್ಮಣ ಪೀಠಾಧಿಪತಿಗಳ ಹಾಗೂ ಮಠಾಧಿಪತಿಗಳ ಅಭಿವೃದ್ಧಿ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಈತ್ತಿಚೆಗೆ ಭೇಟಿ ಮಾಡಿ ಮನವಿ ಪತ್ರದ ಮೂಲಕ ಆಗ್ರಹಿಸಿದ್ದಾರೆ.
ರಾಜ್ಯ ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷರು, ಕೆ.ಪಿ.ಸಿ.ಸಿ. ಮಹಿಳಾ ರಾಜ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಸಂತ ಮುರಳಿ ಅವರು ರಾಜ್ಯಾದ್ಯಂತ ವಿಶ್ವಕರ್ಮ ಸಮಾಜದ ಸಂಘಟಿಸುವ ಜೊತೆಗೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲ್ಲೂಕ ಕೇಂದ್ರಗಳಿಗೆ ನಿರಂತರವಾಗಿ ಭೇಟಿ ನೀಡಿ ಸಮಾಜ ಮತ್ತು ಪಕ್ಷದ ಸಂಘಟನೆ ಮಾಡುವ ಕಾರ್ಯವನ್ನು ನಿಷ್ಠೆಯಿಂದ ದುಡಿಯುತ್ತಿರುವ ಶ್ರೀಮತಿ ವಸಂತ ಮುರಳಿ ಅವರನ್ನು ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು, 
ವಿಶ್ವಕರ್ಮ ನಿಗಮಕ್ಕೆ ಈ ಸಾಲಿನ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡುವ ಮೂಲಕ ಸಮಾಜದ ಕುಶಲಕರ್ಮಿಗಳ ಅಭಿವೃದ್ಧಿಗೆ ಸಹಕರಿಸಬೇಕು. ಎಂದು ವಿಶ್ವಕರ್ಮ ಸಮಾಜದ ಪೀಠಾಧಿಪತಿಗಳ ಮತ್ತು ಮಠಾಧಿಪತಿಗಳ ಒಕ್ಕೂಟದ ರಾಜ್ಯಾಧ್ಯಕ್ಷರು, ಸಿಂದಗಿ ಮೂರುರಾವದ ಮಠದ ಶ್ರೀ ರಾಮಚಂದ್ರ ಸ್ವಾಮೀಜಿ, ಗೌರವಾಧ್ಯಕ್ಷರು ಆರೇಮಾದನಹಳ್ಳಿ ಸುಜ್ಞಾನ ಪ್ರಭು ಪೀಠದ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ, ಕಟಪಾಡಿ ಆನೆಗುಂದಿ ಸಂಸ್ಥಾನ ಪೀಠಾಧ್ಯಕ್ಷರು ಶ್ರೀ ಕಾಳ ಹಸ್ತೇ೦ದ್ರ ಸ್ವಾಮೀಜಿ,
ಕಾರ್ಯಧ್ಯಕ್ಷರು ಶಹಾಪೂರ ಏಕದಂಡಗಿ ಮಠದ ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ, ಉಪಾಧ್ಯಕ್ಷರು ಮುರನಾಳ ಕ್ಷೇತ್ರದ ಶ್ರೀ ಜಗನ್ನಾಥಸ್ವಾಮಿ ಮಹಾಪುರುಷರು, ಪ್ರಧಾನ ಕಾರ್ಯದರ್ಶಿ ವಿಜಯಪುರದ
ಶ್ರೀ ಮಹೇಂದ್ರ ಸ್ವಾಮೀಜಿ, ಶಾಡಲಗೇರಿ ಮಠದ ಶ್ರೀ ನಾಗಲಿಂಗ ಸ್ವಾಮೀಜಿ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಮುಖ್ಯಮ೦ತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*