‘ದಯವಿಟ್ಟು ವಾಪಸ್ ಆಗಿ’ : ನೇಪಾಳಿ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಕೆಐಐಟಿ ಸಂಸ್ಥಾಪಕ

ಭಾಸ್ಕರ ಪತ್ರಿಕೆ
0


ನೇಪಾಳದ ಎಂಜಿನಿಯರಿಂಗ್ ವಿದ್ಯಾರ್ಥಿಯ ಅಸಹಜ ಸಾವು ಮತ್ತು ನೆರೆಯ ದೇಶದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆದ ಕೆಲವು ದಿನಗಳ ನಂತರ, ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಸಂಸ್ಥಾಪಕ ಅಚ್ಯುತ ಸಮಂತಾ ನೇಪಾಳಿ ವಿದ್ಯಾರ್ಥಿಗಳ ಪೋಷಕರಲ್ಲಿ ಕ್ಷಮೆಯಾಚಿಸಿದ್ದಾರೆ ಮತ್ತು ಕ್ಯಾಂಪಸ್ ಖಾಲಿ ಮಾಡಿದ ಎಲ್ಲರೂ ವಾಪಸ್ ಆಗುವಂತೆ ಒತ್ತಾಯಿಸಿದ್ದಾರೆ.

ಈ ಘಟನೆಯ ಬಗ್ಗೆ ಸಮಂತಾ ಅವರ ಮೊದಲ ಸಾರ್ವಜನಿಕ ಹೇಳಿಕೆಯ ವೀಡಿಯೊವನ್ನು ಕೆಐಐಟಿಯ ಎಕ್ಸ್ ಫ್ಲ್ಯಾಟ್ ಫಾರ್ಮ್‌ನಲ್ಲಿ ಪೋಸ್ಟ್ ಮಾಡಲಾಗಿದ್ದು, ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿರುವ ಒಡಿಶಾ ಸರ್ಕಾರದ ಉನ್ನತ ಮಟ್ಟದ ಸಮಿತಿಯು ಶುಕ್ರವಾರ ತನ್ನ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*