ಚಿಕ್ಕಮಗಳೂರು: ಚಿಕ್ಕಮಗಳೂರು ಹಾಗೂ ಮೂಡಿಗೆರೆ ತಾಲೂಕುಗಳಲ್ಲಿ ನಿನ್ನೆ ಧಾರಾಕಾರ ಮಳೆ ಸುರಿದಿದೆ. ಕಾಫಿನಾಡಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯೊಂದಿಗೆ ಭಾರೀ ಗಾಳಿ, ಗುಡುಗು–ಮಿಂಚು ಸಂಭವಿಸಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ, ಚಿಕ್ಕಮಗಳೂರು ತಾಲೂಕಿನ ಆಲ್ದೂರು, ಕೂದುವಳ್ಳಿ, ತುಡುಕೂರು ಭಾಗಗಳಲ್ಲಿ ಅತೀ ಹೆಚ್ಚು ಮಳೆಯಾಗಿದೆ.
ಮಳೆ ಪರಿಣಾಮವಾಗಿ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಹಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಹಾರಿಹೋಗಿರುವ ವರದಿಯಾಗಿದೆ.

