ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದೆ. ಅಧಿವೇಶನದ ಮೊದಲ ದಿನವೇ ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ.
ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ಕಾಂಗ್ರೆಸ್ ಸರ್ಕಾರದ ಕ್ರಮದ ವಿರುದ್ಧ ಶಾಸಕರ ಭವನದಿಂದ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಲು ಬಿಜೆಪಿ ಯೋಜಿಸಿದೆ.
ವಿಧಾನಸೌಧದಲ್ಲಿ ಇಂದು ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಜೆಟ್ ಅಧಿವೇಶನ, ಮಾರ್ಚ್ 21 ರಂದು ಕೊನೆಗೊಳ್ಳಲಿದೆ.

