ಬೆಂಗಳೂರು: ಚಂದ್ರನ ದರ್ಶನವಾದ ಹಿನ್ನಲೆಯಲ್ಲಿ ಭಾನುವಾರದಿಂದ ದೇಶಾದ್ಯಂತ ರಂಜಾನ್ ಉಪವಾಸ ಆರಂಭಗೊಂಡಿದೆ. ಕರಾವಳಿಯಲ್ಲಿ ಚಂದ್ರನ ದರ್ಶನವಾಗಿದೆ. ಹೀಗಾಗಿ ಕರಾವಳಿಯಲ್ಲಿ ಇಂದಿನಿಂದ ರಂಜಾನ್ ಮಾಸ ಆರಂಭಗೊಳ್ಳಲಿದೆ ಎಂದು ಮುಸ್ಲಿಮ್ ಮುಖಂಡರು ಮಾಹಿತಿ ನೀಡಿದ್ದಾರೆ.
ರಾಜ್ಯದ ಕರಾವಳಿಯಲ್ಲಿ ಇಂದಿನಿಂದ ರಂಜಾನ್ ವ್ರತ ಆರಂಭಗೊಂಡಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿಯಲ್ಲಿ ರಂಜಾನ್ ಉಪವಾಸ ವ್ರತವನ್ನು ಆಚರಣೆ ಆರಂಭಗೊಂಡಿದೆ.
ರಾಜ್ಯದ ಕೆಲವೆಡೆ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ರಂಜಾನ್ ಉಪವಾಸ ವ್ರತ ಆಚರಣೆ ಆರಂಭಗೊಳ್ಳಲಿದೆ ಎಂದು ಮುಸ್ಲಿಂ ಸಮುದಾಯದ ಮುಖಂಡರು ತಿಳಿಸಿದ್ದಾರೆ.

