ಚಿಕ್ಕಮಗಳೂರಿಗೆ ಸಮೀಪವೇ ಬಂದ ಒಂಟಿ ಸಲಗ: ಸ್ಥಳೀಯರಲ್ಲಿ ಆತಂಕ

ಭಾಸ್ಕರ ಪತ್ರಿಕೆ
0



ಚಿಕ್ಕಮಗಳೂರು: ಕಳೆದ ರಾತ್ರಿ ಚಿಕ್ಕಮಗಳೂರು ನಗರಕ್ಕೆ ಹೊಂದಿಕೊಂಡಿರುವ ನಲ್ಲೂರಿನಲ್ಲಿ ಒಂಟಿ ಸಲಗ ತಿರುಗಾಡಿದ ಘಟನೆ ಆತಂಕಕ್ಕೆ ಕಾರಣವಾಗಿದೆ. ನಗರದಿಂದ ಕೇವಲ 2 ಕಿ.ಮೀ. ದೂರದಲ್ಲಿಯೇ ಈ ಸಲಗ ಕಂಡು ಬಂದಿದ್ದು, ಇದು ನಗರ ಪ್ರದೇಶಕ್ಕೆ ಪ್ರವೇಶಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ.

ಸಿಸಿಟಿವಿಯಲ್ಲಿ ಸೆರೆ:

ನಲ್ಲೂರಿನ ವಿವಿಧ ರಸ್ತೆಗಳಲ್ಲೂ ಆನೆ ಸಂಚರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದು, ಮನೆಯಿಂದ ಹೊರಬರಲು ಹಿಂಜರಿದಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳ ಹರಸಾಹಸ:

ಸಲಗವನ್ನು ಕಾಡು ಪ್ರದೇಶಕ್ಕೆ ಹಿಮ್ಮೆಟ್ಟಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಅದನ್ನು ಸುರಕ್ಷಿತವಾಗಿ ಮರಳಿಸಲು ತಕ್ಕ ಮುನ್ನೆಚ್ಚರಿಕೆ ವಹಿಸಲಾಗಿದೆ.

ಸ್ಥಳೀಯರಲ್ಲಿ ಆತಂಕ:

ಹಠಾತ್ ಆನೆಯ ದರ್ಶನವಾದ ಹಿನ್ನೆಲೆಯಲ್ಲಿ ನಲ್ಲೂರಿನ ನಿವಾಸಿಗಳು ಆತಂಕಗೊಂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*