ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾರಾವ್ ಪ್ಲಾಟ್ ಮೇಲೆ ದಾಳಿ: ಕೋಟಿ ಕೋಟಿ ಮೌಲ್ಯದ ಚಿನ್ನ ಪತ್ತೆ

ಭಾಸ್ಕರ ಪತ್ರಿಕೆ
0

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ರಾವ್ ಸಿಕ್ಕಿ ಬಿದ್ದಿದ್ದು, ಇದೀಗ ರನ್ಯಾ ರಾವ್ ಪ್ಲಾಟ್ ಮೇಲೆಯೂ ಡಿಆರ್ ಐ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ ಕೋಟಿ ಕೋಟಿ ಮೌಲ್ಯದ ಚಿನ್ನ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಲ್ಯಾವೆಲ್ಲಿ ರಸ್ತೆ ಮನೆಯಲ್ಲಿ 2.6 ಕೋಟಿ ಮೌಲ್ಯದ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ರಾತ್ರಿ 2.67 ಕೋಟಿ ಹಣವನ್ನು ಡಿಆರ್ ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಸದ್ಯ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾ ರಾವ್ ಗೆ  14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸೋಮವಾರ ರಾತ್ರಿ ದೆಹಲಿಯಿಂದ ಬಂದಿಳಿದ ನಟಿ ರನ್ಯಾ ರಾವ್ ಬಳಿ 12 ಕೋಟಿ ಮೌಲ್ಯದ 14.8 ಕೆ.ಜಿ. ಚಿನ್ನ ಪತ್ತೆಯಾಗಿತ್ತು.  ವಿದೇಶದಿಂದ ಕಳ್ಳಸಾಗಣೆಯಾದ ಚಿನ್ನವನ್ನು ನಟಿ ರನ್ಯಾರಾವ್ ದೆಹಲಿಯಿಂದ ಬೆಂಗಳೂರಿಗೆ ತರುತ್ತಿರುವ ಬಗ್ಗೆ  ಡಿಆರ್ ಐ ಅಧಿಕಾರಿಗಳು ಖಚಿತ ಮಾಹಿತಿಯೊಂದಿಗೆ ಕಾರ್ಯಾಚರಣೆ ನಡೆಸಿ, ವಶಪಡಿಸಿಕೊಂಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*