ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿ ಘೋಷಣೆ ಕೂಗಿದ 7 ಮಂದಿಯ ಬಂಧನ: ಪ್ರಕರಣ ದಾಖಲು

ಭಾಸ್ಕರ ಪತ್ರಿಕೆ
0


ಬೆಂಗಳೂರು: ರಾಜ್ಯ ಬಜೆಟ್ ಮಂಡನೆ ವೇಳೆ  ಒಳ ಮೀಸಲಾತಿಗೆ ಆಗ್ರಹಿಸಿ ಸಾರ್ವಜನಿಕರ ಗ್ಯಾಲರಿ ಹಾಗೂ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಘೋಷಣೆ ಕೂಗಿದ್ದ ಏಳು ಮಂದಿಯನ್ನು ವಿಧಾನಸೌಧ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಹೆಚ್‌.ಎಸ್‌.ಆರ್. ಲೇಔಟ್ ಎ.ವಿಜಯಕುಮಾರ್, ಎಸ್.ಎಸ್.ವಿಜಯಶೇಖರ್, ಹೊಸಪಾಳ್ಯ ಮುಖ್ಯರಸ್ತೆಯ ಸತ್ಯೇಂದ್ರಕುಮಾರ್, ಜಾಂಬವನಗರದ ಎಂ.ರಾಜರತ್ನಂ ಸರ್ಜಾಪುರದ ಎಸ್.ವಿ.ಸುರೇಶ್, ಚೊಕ್ಕಸಂದ್ರದ ಎನ್.ವೇಣುಗೋಪಾಲ್. ಸರ್ಜಾಪುರ ಅಂಬೇಡ್ಕರ್ ಕಾಲೊನಿಯ ಎಸ್.ವಿ.ಶ್ರೀನಿವಾಸ್ ಬಂಧಿತರು ಎಂದು ಗುರುತಿಸಲಾಗಿದೆ.

ವಿಧಾನಸಭೆ ದಂಡನಾಯಕ ಹೆಚ್.ಎಸ್.ಜಯಕೃಷ್ಣ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು. ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಾರ್ವಜನಿಕರ ಗ್ಯಾಲರಿ ಹಾಗೂ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಬಂಧಿತ ಏಳು ಮಂದಿ ಬಜೆಟ್‌ ಅಧಿವೇಶನದ ವೀಕ್ಷಣೆ ಮಾಡುತ್ತಿದ್ದರು. ಮುಖ್ಯಮಂತ್ರಿಗಳು ಬಜೆಟ್‌ ಮಂಡನೆ ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಸದಾಶಿವ ಆಯೋಗದ ವರದಿ ಜಾರಿ, ಒಳ ಮೀಸಲಾತಿ ಜಾರಿ ಮಾಡಿ ಎಂದು ಘೋಷಣೆ ಕೂಗಿದರು. ಕೂಡಲೇ ಮಾರ್ಷಲ್‌ ಗ‌ಳು ಅವರನ್ನು ವಶಕ್ಕೆ ಪಡೆದುಕೊಂಡರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*