ಗುತ್ತಿಗೆಯಲ್ಲಿ ಮೀಸಲಾತಿ ನೀಡಿರುವುದು ಕೇವಲ ಮುಸ್ಲಿಮರಿಗೆ ಮಾತ್ರವಲ್ಲ: ಡಿ.ಕೆ.ಶಿವಕುಮಾರ್

ಭಾಸ್ಕರ ಪತ್ರಿಕೆ
0

ಬೆಂಗಳೂರು: ಗುತ್ತಿಗೆಯಲ್ಲಿ ಮೀಸಲಾತಿ ಮುಸ್ಲಿಮರಿಗೆ ಮಾತ್ರವಲ್ಲ, ಅಲ್ಪಸಂಖ್ಯಾತ ಮತ್ತು ಹಿಂದುಳಿದವರಿಗೂ ಮೀಸಲಾತಿ ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಮುದಾಯದವರಿಗೆ ಮಾತ್ರ ಶೇ.4ರಷ್ಟು ಮೀಸಲಾತಿ ನೀಡಲಾಗುತ್ತಿದೆ ಎಂದು ಹೇಳಿದವರು ಯಾರು? ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೂ ಮೀಸಲಾತಿ ನೀಡಲಾಗುತ್ತಿದೆ ಎಂದರು.

ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲಿಂ ಸಮುದಾಯದವರಲ್ಲ. ಕ್ರಿಶ್ಚಿಯನ್, ಜೈನ, ಪಾರ್ಸಿ, ಸಿಖ್ ಹೀಗೆ ಹಲವು ಧರ್ಮಗಳೂ ಬರುತ್ತವೆ. ಈ ಹಿಂದೆ ಪರಿಶಿಷ್ಟ ಜಾತಿ/ಪಂಗಡದ ವರಿಗೆ ಗುತ್ತಿಗೆ ಮೀಸಲಾತಿ ನೀಡಲು ತಿದ್ದುಪಡಿ ಮಾಡಲಾಗಿತ್ತು. ಈಗ ಅದಕ್ಕೆ ಅಲ್ಪಸಂಖ್ಯಾತರು, ಹಿಂದುಳಿದವರನ್ನು ಸೇರಿಸಲಾಗುತ್ತಿದೆ ಎಂದು ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*