ನಾಗ್ಪುರಕ್ಕೆ ಮೋದಿ ಭೇಟಿ: ಆರ್ ಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ

ಭಾಸ್ಕರ ಪತ್ರಿಕೆ
0

ಭಾನುವಾರ ಮಹಾರಾಷ್ಟ್ರದ ನಾಗ್ಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರೇಶಿಂಬಾಗ್ ನ ಸ್ಮೃತಿ ಮಂದಿರದಲ್ಲಿ ಆರ್ ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಇತರ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಆರ್ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಅವರಿಗೆ ಗೌರವ ಸಲ್ಲಿಸಿದರು.

ಬೆಳಿಗ್ಗೆ 9 ಗಂಟೆ ಸುಮಾರಿಗೆ ನಾಗ್ಪುರಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಮಹಾರಾಷ್ಟ್ರ ಕ್ಯಾಬಿನೆಟ್ನ ಇತರ ಸಚಿವರು ನಾಗ್ಪುರ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರಿಗಿಂತ ಮುನ್ನ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಸ್ಮೃತಿ ಮಂದಿರಕ್ಕೆ ಆಗಮಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*