ಕನ್ನಡ ಶಾಲೆಗೆ ಬೀಗ ಹಾಕಲು ಬಿಇಓ ಒತ್ತಡ!

ಭಾಸ್ಕರ ಪತ್ರಿಕೆ
0

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಬೈಲಪ್ಪನಮಠದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಅನುದಾನಿತ ಪ್ರೌಢಶಾಲೆಯನ್ನು ಮುಚ್ಚಲು ಬಿಇಓ ವಿದ್ಯಾರ್ಥಿಗಳು, ಶಿಕ್ಷಕರ ಮೇಲೆ ಒತ್ತಡ ಹಾಕುತ್ತಿರುವ ಗಂಭೀರ ಆರೋಪ ಕೇಳಿ ಬಂದಿದೆ.

4 ವಾರಗಳ ಕಾಲ ಯಥಾ ಸ್ಥಿತಿ ಕಳೆದುಕೊಳ್ಳುವಂತೆ ಕೋರ್ಟ್ ಆದೇಶವಿದ್ದರೂ ಕೂಡ, ಬಿಇಓ ಅಕ್ರಮವಾಗಿ ಶಾಲೆ ಮುಚ್ಚಲು ಮುಂದಾಗಿದ್ದಾರೆ ಎಂದು ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಸಿದ್ದಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಹಾಜರಾತಿ ಹಾಗೂ ಎಲ್ಲಾ ದಾಖಲೆಗಳಿದ್ದರೂ ಕನ್ನಡ ಶಾಲೆಗೆ ಬೀಗ ಹಾಕಲು ಮುಂದಾಗಿದ್ದಾರೆ. SC, ST ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಓದುತ್ತಿರುವ ಶಾಲೆಯನ್ನ ಮುಚ್ಚಲು ಅಧಿಕಾರಿಗಳು ಮುಂದಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳೇ ಕನ್ನಡ ಶಾಲೆಗಳ ಭವಿಷ್ಯ ಅಪಾಯಕ್ಕೆ ದೂಡುತ್ತಿದ್ದಾರೆ ಎಂಬ ಆರೋಪವನ್ನ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಸಿದ್ದಪ್ಪ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*