ಮಕ್ಕಳ ದಾಖಲಾತಿಗೆ ಒತ್ತಡ ಹೇರುವಂತಿಲ್ಲ: ಬಿಇಓ

ಭಾಸ್ಕರ ಪತ್ರಿಕೆ
0

ತುಮಕೂರು:  ಪ್ರಸಕ್ತ ಶೈಕ್ಷಣಿಕ ವರ್ಷ ಮುಕ್ತಾಯವಾಗುವ ಮುನ್ನವೇ ಕೆಲವು ಖಾಸಗಿ ಶಾಲೆಗಳು ಮಕ್ಕಳನ್ನು ದಾಖಲು ಮಾಡುವಂತೆ ಪೋಷಕರನ್ನು ಒತ್ತಾಯ ಮಾಡುತ್ತಿರುವ ಬಗ್ಗೆ ಜಿಲ್ಲಾ ಖಾಸಗಿ ಶಾಲಾ ಮಕ್ಕಳ ಪೋಷಕರ ಸಂಘ ಆರೋಪಿಸಿದೆ.

ಮಕ್ಕಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆಯಾಗದ ಕಾರಣ 2025–26ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭಕ್ಕೂ ಮುನ್ನ ಮಕ್ಕಳ ದಾಖಲಾತಿ ಮಾಡಿಕೊಂಡ ಬಗ್ಗೆ ಪೋಷಕರಿಂದ/ಸಾರ್ವಜನಿಕರಿಂದಾಗಲಿ ದೂರುಗಳು ಬಂದಲ್ಲಿ ಸಂಬಂಧಿಸಿದ ಶಾಲೆ/ ಶಾಲಾ ಆಡಳಿತ ಮಂಡಳಿಯನ್ನು ನೇರ ಜವಾಬ್ದಾರರನ್ನಾಗಿಸಿ ಶಿಸ್ತು ಕ್ರಮಕ್ಕಾಗಿ ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ತುಮಕೂರು ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*