ಪಹಲ್ಗಾಮ್ ಭಯೋತ್ಪಾದಕ ದಾಳಿ: ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ ಘೋಷಣೆ

ಭಾಸ್ಕರ ಪತ್ರಿಕೆ
0

ಬೆಂಗಳೂರು:  ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

ಇದೇ ವೇಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು, ಸಿಎಂ ಸಿದ್ದರಾಮಯ್ಯ, ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋಗಿದ್ದ ಅಮಾಯಕ ಜನರನ್ನು ಹಾಡುಹಗಲೇ ಪತ್ನಿ, ಮಕ್ಕಳ ಎದುರೇ ಉಗ್ರರು ಗುಂಡು ಹಾರಿಸಿ ಸಾಯಿಸಿ ಹೇಯಕೃತ್ಯ ತೋರಿಸಿದ್ದಾರೆ. ಈ ಕೃತ್ಯ ಅತ್ಯಂತ ಖಂಡನೀಯ, ಉಗ್ರರನ್ನು ಸಂಪೂರ್ಣವಾಗಿ ಮಟ್ಟಹಾಕುವುದು ಸರ್ಕಾರದ ಜವಾಬ್ದಾರಿ. ಸರ್ಕಾರ ಇದರಲ್ಲಿ ವಿನಾಯಿತಿ ತೋರಿಸಬಾರದು. ಕೇಂದ್ರ ಸರ್ಕಾರದ ಜೊತೆ ನಾವೆಲ್ಲಾ ಇದ್ದೇವೆ. ಉಗ್ರರನ್ನು ಮಟ್ಟಹಾಕುವ ಕೆಲಸ ಕೇಂದ್ರ ಸರ್ಕಾರ ಮಾಡಬೇಕು. ಅದಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದರು.

ಕೆಲ ವರ್ಷಗಳ ಹಿಂದೆ ಪುಲ್ವಾಮಾ ದಾಳಿಯಲ್ಲಿ 40 ಯೋಧರು ಹುತಾತ್ಮರಾಗಿದ್ದರು. ಉಗ್ರರನ್ನು ಪತ್ತೆಹಚ್ಚಿ ದೇಶದಲ್ಲಿ ಅವರನ್ನು ಸಂಪೂರ್ಣ ನಿರ್ನಾಮ ಮಾಡಬೇಕು. ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯ ಕೂಡ ಈ ಘಟನೆಗೆ ಕಾರಣವಾಗಿರಬಹುದು ಎಂದರು.

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ 10 ಲಕ್ಷ ರೂಪಾಯಿ ಪರಿಹಾರ ನೀಡುತ್ತದೆ, ಅವರ ಕುಟುಂಬಸ್ಥರ ಕಷ್ಟಕ್ಕೆ ಸರ್ಕಾರ ನಿಲ್ಲುತ್ತದೆ ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*