ಉದ್ಯೋಗ: ಏ.19ರಂದು ನೇರ ಸಂದರ್ಶನ

ಭಾಸ್ಕರ ಪತ್ರಿಕೆ
0

ತುಮಕೂರು:  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಟಿ.ವಿ.ಎಸ್. ಎಲೆಕ್ಟ್ರಾನಿಕ್ಸ್ ಹಾಗೂ ಮೆಡ್‌ ಪ್ಲಸ್ ಸಂಸ್ಥೆಯ ಸಹಯೋಗದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಏಪ್ರಿಲ್ 19ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಯಲಿದ್ದು, ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಯಾವುದೇ ಪದವಿ, ಡಿ.ಫಾರ್ಮ ಹಾಗೂ ಬಿ. ಫಾರ್ಮ ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488, ಮೊ.ಸಂ. 9071021143, 9513136642ನ್ನು ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*