ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ 20 ವರ್ಷ ಜೈಲು, 1.50 ಲಕ್ಷ ರೂ. ದಂಡ

ಭಾಸ್ಕರ ಪತ್ರಿಕೆ
0

ತುಮಕೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(ಪೋಕ್ಸೋ) 20 ವರ್ಷಗಳ ಜೈಲು ಶಿಕ್ಷೆ ಹಾಗೂ ಒಂದೂವರೆ ಲಕ್ಷ ರೂ. ದಂಡ ವಿಧಿಸಿದೆ.

ರಘು ಎಂಬಾತ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ತುಮಕೂರು ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯುಗಾದಿ ಹಬ್ಬದ ಹಿನ್ನೆಲೆ ಪೋಷಕರು ದೇವಸ್ಥಾನಕ್ಕೆ ತೆರಳಿದ್ದರು. ಮನೆಯಲ್ಲಿ ಬಾಲಕಿ ಒಬ್ಬಂಟಿಯಾಗಿದ್ದ ವೇಳೆ ಆಕೆಯ ಮನೆಗೆ ಹೋಗಿ ಅಪರಾಧಿಯು ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಪ್ರಕರಣದ ತನಿಖೆ ನಡೆಸಿದ ತನಿಖಾಧಿಕಾರಿಗಳಾದ ನವೀನ್ ಕುಮಾರ್ ಅವರು ಘನ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಯ ವಿರುದ್ಧ ಇರುವ ಆರೋಪ ಸಾಬೀತಾದ ಹಿನ್ನೆಲೆ 20 ವರ್ಷಗಳ ಜೈಲು ಶಿಕ್ಷೆ 1.50 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಇದೇ ವೇಳೆ ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 4 ಲಕ್ಷ ರೂ. ಗಳ ಪರಿಹಾರ ಸೇರಿದಂತೆ ಒಟ್ಟು 5.50 ಲಕ್ಷ ರೂಪಾಯಿ ಪರಿಹಾರ ನೀಡಿ ಆದೇಶ ನೀಡಿದೆ.

ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ಅವರು ವಾದ ಮಂಡಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*