ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಗುಂಪಿನ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರಲ್ಲಿ ಒಬ್ಬ ಕೈಯಲ್ಲಿ ಎಕೆ –47 ಬಂದೂಕು ಹಿಡಿದುಕೊಂಡು ಹೋಗುತ್ತಿರುವ ಫೋಟೋ ಲಭ್ಯವಾಗಿದೆ.
ಮಂಗಳವಾರ ಮಧ್ಯಾಹ್ನ 2:30 ರ ಸುಮಾರಿಗೆ ‘ಮಿನಿ ಸ್ವಿಟ್ಜರ್ಲೆಂಡ್’ ಎಂದು ಕರೆಯಲ್ಪಡುವ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಮಾರಕ ದಾಳಿಯಲ್ಲಿ ಇಪ್ಪತ್ತಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್–ಎ–ತೊಯ್ಬಾದ ಸ್ಥಳೀಯ ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ದಾಳಿಕೋರರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಈಗ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿವೆ.

