ಪಹಲ್ಗಾಮ್ ಉಗ್ರರ ದಾಳಿ: ಇಬ್ಬರು ಕನ್ನಡಿಗರು ಸೇರಿದಂತೆ 26 ಮಂದಿ ಬಲಿ

ಭಾಸ್ಕರ ಪತ್ರಿಕೆ
0

ಪಹಲ್ಗಾಮ್: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ.

ಕಣಿವೆಗಳಿಂದ ಕೂಡಿದ ಸುಂದರ ಪ್ರವಾಸಿ ತಾಣದಲ್ಲಿ ಉಗ್ರರು, ಪ್ರವಾಸಿಗರ ರಕ್ತದೋಕುಳಿ ಹರಿಸಿದ್ದಾರೆ. ಕಂಡ ಕಂಡಲ್ಲಿ ಪುರುಷರನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ಕರ್ನಾಟಕ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 26ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.

ಗುಂಡಿನ ದಾಳಿ ನಡೆದ ಸ್ಥಳದ ವಿಡಿಯೋದಲ್ಲಿ ಅನೇಕರು ಪ್ರಾಣ ಕಳೆದುಕೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರೆ, ತನ್ನವರನ್ನು ಕಳೆದುಕೊಂಡ ಮಹಿಳೆಯರು ನೋವು, ದು:ಖದಲ್ಲಿ ಅಳುತ್ತಿರುವುದು ಕಂಡುಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಭದ್ರತಾ ಪಡೆ ಹಾಗೂ ವೈದ್ಯಕೀಯ ತಂಡಗಳು ಸಂತ್ರಸ್ತರಿಗೆ ನೆರವಾಗಿದ್ದಾರೆ. ಗಾಯಾಳುಗಳನ್ನು ಕುದುರೆಗಳ ಮೂಲಕ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇಬ್ಬರು ಕನ್ನಡಿಗರ ಬಲಿ: ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಸಾವನ್ನಪ್ಪಿದ್ದಾರೆ. ಆದರೆ ಗುಂಡಿನ ದಾಳಿಯಲ್ಲಿ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ.

ಮತ್ತೋರ್ವ ಕನ್ನಡಿಗನ ಹತ್ಯೆ: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಮತ್ತೋರ್ವ ಕನ್ನಡಿಗನ ಹತ್ಯೆಯಾಗಿದೆ. ಬೆಂಗಳೂರಿನಲ್ಲಿ ವಾಸವಿದ್ದ ಹಾವೇರಿ ಮೂಲದ ಭರತ್ ಭೂಷಣ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*