ಅರಿವು ವಿದ್ಯಾಭ್ಯಾಸ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಭಾಸ್ಕರ ಪತ್ರಿಕೆ
0

ತುಮಕೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲಸೌಲಭ್ಯ ನೀಡಲು ಜಿಲ್ಲೆಯ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಂದ ಆನ್‌ ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ CET/NEET ನಲ್ಲಿ ಆಯ್ಕೆಯಾಗುವ ವೈದ್ಯಕೀಯ (ಎಂ.ಬಿ.ಬಿ.ಎಸ್), ಬಿ.ಡಿ.ಎಸ್., ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಶ್, ಫಾರ್ಮಸಿ, ಕೃಷಿ ವಿಜ್ಞಾನ ಹಾಗೂ ಪಶುವೈದ್ಯಕೀಯ ಹಾಗೂ ಮತ್ತಿತರ ಕೋರ್ಸ್ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಹ ವಿದ್ಯಾರ್ಥಿಗಳು ಮೇ 23ರೊಳಗಾಗಿ ನಿಗಮದ ಅಧಿಕೃತ ವೆಬ್‌ಸೈಟ್ https://kmdconline.karnataka.gov.in  ಮೂಲಕ ಅರ್ಜಿ ಸಲ್ಲಿಸಬಹುದು.

ಆನ್‌ ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಹಾರ್ಡ್ಕಾಪಿ ಹಾಗೂ ವೆಬ್‌ ಸೈಟ್‌ ನಲ್ಲಿ ಅಪ್‌ ಲೋಡ್ ಮಾಡಿದ ಮೂಲ ದಾಖಲೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಮೇ 23ರೊಳಗೆ ಸಲ್ಲಿಸತಕದ್ದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನ ಆಜಾದ್ ಭವನ, ಇಂದಿರಾ ಕಾಲೇಜ್ ಮುಂಭಾಗ, ಉಪ್ಪಾರಹಳ್ಳಿ, ತುಮಕೂರು-572102 ಅಥವಾ ದೂರವಾಣಿ ಸಂಖ್ಯೆ: 0816–2281023ನ್ನು ಸಂಪರ್ಕಿಸಬಹುದೆAದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*