ಮೇ 5ರಂದು ಆಟೋ ಚಾಲಕ/ ಕಾರ್ಮಿಕರ ನೋಂದಣಿ ಅಭಿಯಾನ

ಭಾಸ್ಕರ ಪತ್ರಿಕೆ
0

ತುಮಕೂರು: ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಯೋಜನೆಯಡಿ ಆಟೋ ಚಾಲಕರು ಹಾಗೂ ಇಶ್ರಮ್ ಯೋಜನೆಯಡಿ ವಿವಿಧ ವರ್ಗದ ಕಾರ್ಮಿಕರನ್ನು ನೋಂದಣಿ ಮಾಡುವ ಅಭಿಯಾನವನ್ನು ಮೇ 5ರಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಾಂಕೇತಿಕವಾಗಿ ಹಮ್ಮಿಕೊಳ್ಳಲಾಗಿದೆ.

ಈ ಯೋಜನೆಯು ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ. ಅಭಿಯಾನದಲ್ಲಿ ನೋಂದಾಯಿಸುವವರ ವಯೋಮಿತಿ 18 ರಿಂದ 60 ವರ್ಷದೊಳಗಿರಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಇ.ಪಿ.ಎಫ್. ಹಾಗೂ ಇ.ಎಸ್.ಐ ಸೌಲಭ್ಯ ಹೊಂದಿರಬಾರದು. ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲೂ ಸಹ ಲಭ್ಯವಾಗುತ್ತವೆ. ಚಾಲಕರು, ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಿಂದ ವಾಣಿಜ್ಯ ವಾಹನ ಚಲಾಯಿಸಲು ಊರ್ಜಿತ ಚಾಲನಾ ಪರವಾನಗಿಯನ್ನು ಹೊಂದಿರುವುದು ಕಡ್ಡಾಯವಾಗಿದೆ.

ಅರ್ಹರು ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ಊರ್ಜಿತ ಚಾಲನಾ ಪರವಾನಗಿ, ಬ್ಯಾಂಕ್ ಪಾಸ್‌ ಪುಸ್ತಕದೊಂದಿಗೆ ಅಭಿಯಾನದಲ್ಲಿ ಭಾಗವಹಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿ/ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸಿ ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕೆಂದು ಕಾರ್ಮಿಕ ಅಧಿಕಾರಿ ತೇಜಾವತಿ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*