ತುಮಕೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಮೃತದೇಹವನ್ನು ಬೆಂಗಳೂರು ಮೂಲಕ ಶಿವಮೊಗ್ಗಕ್ಕೆ ತುಮಕೂರು ಮೂಲಕ ಕೊಂಡೊಯ್ಯಲಾಯಿತು.
ತುಮಕೂರಿನ ಜಾಸ್ ಟೋಲ್ ಗೇಟ್ ಬಳಿ ಬಂದ ಪಾರ್ಥಿವ ಶರೀರಕ್ಕೆ ಬಿಜೆಪಿ ಶಾಸಕ ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷರು ಹೆಬ್ಬಾಕ ರವಿಶಂಕರ್ ಹಾರ ಹಾಕಿ ಗೌರವ ಸಮರ್ಪಣೆ ಮಾಡಿದರು.
ಇದೇ ವೇಳೆ ಮಾತನಾಡಿದ ಅವರು, ಭಯೋತ್ಪಾದನೆ ವಿರುದ್ಧ ಪ್ರಧಾನಿ ಮೋದಿ ತೆಗೆದುಕೊಳ್ಳುವಂತಹ ಯಾವುದೇ ರೀತಿಯ ಕಠಿಣ ನಿರ್ಧಾರಕ್ಕೆ ನಾವು ಬೆಂಬಲವಾಗಿ ನಿಂತಿದ್ದೇವೆ ಎಂದರು.
ಮಂಜುನಾಥ್ ಅವರ ಕುಟುಂಬದ ಎದುರೇ ಭಯೋತ್ಪಾದಕರು ಮಂಜುನಾಥ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ ಇದು ಹೇಯ ಕೃತ್ಯವಾಗಿದೆ ಎಂದು ಹೇಳಿದರು.
ಆಂಬ್ಯುಲೆನ್ಸ್ ಮೂಲಕ ತೆರಳಿದ ಮಂಜುನಾಥ್ ಮೃತದೇಹದ ಜೊತೆಯಲ್ಲಿ ಅವರ ಪತ್ನಿ ಹಾಗೂ ಕುಟುಂಬದವರು ಕೂಡ ಸಾಗಿದರು. ಮಂಜುನಾಥ್ ಮೃತ ದೇಹವು ತುಮಕೂರು, ಶಿರಾ, ಹಿರಿಯೂರು, ಚಿತ್ರದುರ್ಗ, ಹೊಳಲ್ಕೆರೆ ಚನ್ನಗಿರಿ ಮಾರ್ಗವಾಗಿ ಶಿವಮೊಗ್ಗ ತಲುಪಲಿದೆ.

