ಭಾರೀ ಮಳೆ: ಸಹಾಯವಾಣಿ ಸಂಖ್ಯೆಗೆ ಮಾಹಿತಿ ನೀಡಿ

ಭಾಸ್ಕರ ಪತ್ರಿಕೆ
0

ತುಮಕೂರು: ಪೂರ್ವ–ಮುಂಗಾರು ಹಂಗಾಮಿನಲ್ಲಿ ಪ್ರಸ್ತುತ ನಿರಂತರ ಮೋಡ ಕವಿದ ವಾತಾವರಣ ಮತ್ತು ಭಾರೀ ಗಾಳಿ, ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಭಾರಿ ಮಳೆಯಿಂದ ಉಂಟಾಗಬಹುದಾದ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ.

ಜಿಲ್ಲೆಯ ಸಾರ್ವಜನಿಕರು ಮಳೆಯಿಂದ ಉಂಟಾಗುವ ಯಾವುದೇ ತುರ್ತು ಪರಿಸ್ಥಿತಿ ಕುರಿತು ಸಹಾಯವಾಣಿ ಸಂಖ್ಯೆ: 0816–2213400, 0816–155304, 7304975519(ವಾಟ್ಸಪ್)ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*