ಭೀಕರ ರಸ್ತೆ ಅಪಘಾತ: ಐವರು ಸ್ಥಳದಲ್ಲೇ ಸಾವು

ಭಾಸ್ಕರ ಪತ್ರಿಕೆ
0

ವಿಜಯಪುರ: ಸ್ಕಾರ್ಪಿಯೋ ಕಂಟೇನರ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ಳಂಬೆಳಗ್ಗೆ ನಡೆದಿದೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಭೀಕರ ಅಪಘಾತ ನಡೆದಿದೆ.

ಸ್ಕಾರ್ಪಿಯೋದಲ್ಲಿದ್ದ ನಾಲ್ವರು ಹಾಗೂ ಖಾಸಗಿ ಬಸ್ನಲ್ಲಿದ್ದ ಒಬ್ಬ ಸ್ಥಳದಲ್ಲೇ ಮೃತಪಟ್ಟವರು ಎಂದು ತಿಳಿದು ಬಂದಿದೆ. ಹಲವರು ಗಾಯಗೊಂಡಿದ್ದಾರೆ.

ಮೃತರ ಹೆಸರು ಮತ್ತು ಮಾಹಿತಿ ಲಭ್ಯವಾಗಬೇಕಿದೆ. ಅಪಘಾತದ ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಬಂದ ಮನಗೂಳಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*