ತುಮಕೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಹಿಂದೂಗಳ ಹತ್ಯೆಗೆ ಪ್ರತ್ಯುತ್ತರವಾಗಿ ಭಾರತ ಪಾಕಿಸ್ತಾನದ ಮೇಲೆ ಆರಂಭಿಸಿರುವ ʼಆಪರೇಷನ್ ಸಿಂಧೂರʼಕ್ಕೆ ತುಮಕೂರು ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ನಗರದ ಶ್ರೀ ಸೋಮೇಶ್ವರ ದೇಗುಲದಲ್ಲಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ವಿಶೇಷ ಗಣ ಹೋಮ ನಡೆಸಲಾಯಿತು.
ಅಲ್ಲದೆ ಶ್ರೀ ಸೋಮೇಶ್ವರ ಸ್ವಾಮಿ ಗರ್ಭಗುಡಿಯಲ್ಲಿ ವಿಶೇಷ ಅರ್ಚನೆ ಹಾಗೂ ಮಂಗಳಾರತಿ ನಡೆಸಲಾಯಿತು.
ದೇಶದ ಪ್ರಧಾನಮಂತ್ರಿ ಸೇರಿದಂತೆ ಪಾಕಿಸ್ತಾನದ ವಿರುದ್ಧ ಹೋರಾಡುತ್ತಿರುವ ಪ್ರತಿಯೊಬ್ಬ ಸೈನಿಕರಿಗೂ ಆಯಸ್ಸು ಹಾಗೂ ಆರೋಗ್ಯ ಹಾಗೂ ಹೋರಾಡುವ ಶಕ್ತಿ ಕರುಣಸಲಿ ಎಂದು ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು.
ಮಹಾಸಭಾದ ಜಿಲ್ಲಾಧ್ಯಕ್ಷರಾದ ಡಾ.ಎಸ್.ಪರಮೇಶ್, ವೀರಶೈವ ಸಮಾಜದ ಅಧ್ಯಕ್ಷ ಚಂದ್ರಮೌಳಿ, ದೇಶಪ್ರೇಮಿಗಳು ಭಾಗವಹಿಸಿದ್ದರು.

