15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಅಪ್ರಾಪ್ತ ವಯಸ್ಕರ ಬಂಧನ, ಮತ್ತೊಬ್ಬನಿಗಾಗಿ ಶೋಧ

ಭಾಸ್ಕರ ಪತ್ರಿಕೆ
0

ಬೆಳಗಾವಿ: 15 ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ  ಬೆಳಗಾವಿ ಹೊರ ವಲಯದ ರೆಸಾರ್ಟ್‌ನಲ್ಲಿ ನಡೆದಿದೆ.

ಒಂದು ವಾರದ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರದ ಹಿಂದೆ ಆರೋಪಿಗಳ ಪೈಕಿ ಒಬ್ಬನ ಹೆಸರಿನಲ್ಲಿ ರೆಸಾರ್ಟ್ ರೂಮ್ ಬುಕ್ ಮಾಡಲಾಗಿತ್ತು. ಬಾಲಕಿಯ ಸ್ನೇಹಿತ ಆಕೆಯನ್ನು ರೂಮ್ ಗೆ ಕರೆತಂದಿದ್ದ. ಬಳಿಕ ಮೂವರು ಸೇರಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.

ಮನೆಗೆ ವಾಪಸ್ ಬಂದ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ತೀವ್ರ ಹೊಟ್ಟೆ ನೋವು ಎಂದಿದ್ದ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಅತ್ಯಾಚಾರಕ್ಕೊಳಗಾಗಿರುವುದು ಬೆಳಕಿಗೆ ಬಂದಿದೆ.

ಘಟನೆ  ಸಂಬಂಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು  ಪೊಲೀಸರು ಬಂಧಿಸಿದ್ದು, ಮತ್ತೊಬ್ಬನ ಬಂಧನಕ್ಕಾಗಿ ಶೋಧ ನಡೆಸಲಾಗುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*