ಹೃದಯಾಘಾತಕ್ಕೆ 19 ವರ್ಷದ ಯುವತಿ ಬಲಿ!

ಭಾಸ್ಕರ ಪತ್ರಿಕೆ
0

ಹಾಸನ: ಸಣ್ಣ ವಯಸ್ಸಿನವರೇ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಘಟನೆಗಳು ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಇದೀಗ 19 ವರ್ಷದ ಯುವತಿಯೊಬ್ಬಳು ಹೃದಯಾಘಾತಕ್ಕೆ ಬಲಿಯಾಗಿರುವ ಆಘಾತಕಾರಿ ಘಟನೆ ಹಾಸನದ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.

ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ  ಸಂಧ್ಯಾ(19) ಮೃತಪಟ್ಟ ಯುವತಿಯಾಗಿದ್ದಾಳೆ. ಈಕೆ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು.

ಬಾತ್ ರೂಮ್ ಗೆ ಹೋಗಿದ್ದ ಸಂಧ್ಯಾ ಅಲ್ಲಿಯೇ ಕುಸಿದು ಬಿದ್ದಿದ್ದಾಳೆ. ಕೂಡಲೇ ಪೋಷಕರು ಬಾತ್ ರೂಮ್ ಬಾಗಿಲು ಮುರಿದು ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಅಷ್ಟೊತ್ತಿಗಾಗಲೇ ಸಂಧ್ಯಾ ಸಾವನ್ನಪ್ಪಿದ್ದಳು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*